Home News ಶಿವಮೊಗ್ಗ: ಹೊಸನಗರ-ಬೆಂಗಳೂರು ಖಾಸಗಿ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ

ಶಿವಮೊಗ್ಗ: ಹೊಸನಗರ-ಬೆಂಗಳೂರು ಖಾಸಗಿ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ: ಹೊಸನಗರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಬಸ್ಸಿನಲ್ಲಿ ಮಧ್ಯರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡು, ಇಡೀ ಬಸ್‌ ಸುಟ್ಟು ಕರಕಲಾದ ಘಟನೆ ನಡೆದಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಹೊಸನಗರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ಅನ್ನಪೂರ್ಣೇಶ್ವರಿ ಸಂಸ್ಥೆಯ ಬಸ್ಸಿನಲ್ಲಿ ಅರಸಾಳು ಮತ್ತು ಸೂಡೂರು ಗ್ರಾಮಗಳ ಮಧ್ಯದ 9ನೇ ಮೈಲಿಗಲ್ಲು ಬಳಿ ಈ ಅವಘಡ ನಡೆದಿದೆ.

ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಎಚ್ಚೆತ್ತ ಚಾಲಕ ಕೂಡಲೇ ಬಸ್ಸನ್ನು ನಿಯಂತ್ರಣ ಮಾಡಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದು, ನಂತರ ಪ್ರಯಾಣಿಕರಿಗೆ ಎಮರ್ಜೆನ್ಸಿ ಡೋರ್‌ ಮೂಲಕ ಹೊರಬರಲು ಸಾಧ್ಯವಾಯಿತು.

ಬಸ್ಸಿನಲ್ಲಿ ಒಟ್ಟು 40 ಪ್ರಯಾಣಿಕರ ಪೈಕಿ ಎಂಟು ಜನರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಬಸ್ಸಿಗೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಪ್ರಯಾಣಿಕರ ಬಟ್ಟೆ-ಬರೆ ಹಾಗೂ ಬೆಲೆಬಾಳುವ ವಸ್ತುಗಳು ಬೆಂಕಿಗೆ ಅಹುತಿಯಾಗಿದೆ. ಸ್ಥಳೀಯರು ಮತ್ತು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಧಾವಿಸಿ ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬಸ್ಸಿನಲ್ಲಿ ಬೆಂಕಿ ಕಾಣಿಸಲು ನಿಖರ ಕಾರಣದ ಕುರಿತು ತನಿಖೆ ನಡೆಯುತ್ತಿದೆ.