Home Crime ಮಲ್ಪೆ: ದೋಣಿ ದುರಂತ ಪ್ರಕರಣ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮಲ್ಪೆ: ದೋಣಿ ದುರಂತ ಪ್ರಕರಣ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

Death

Hindu neighbor gifts plot of land

Hindu neighbour gifts land to Muslim journalist

ಮಲ್ಪೆ: ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 3 ಆಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇನ್ನೋರ್ವ ಯುವತಿ ಮಂಗಳವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಮೈಸೂರು ಮೂಲದ ದಿಶಾ (26) ಮೃತಪಟ್ಟ ಮಹಿಳೆ. ದಿಶಾ ಮೈಸೂರಿನ ʼಗೋಲ್‌ ಕ್ರಿಸ್ಟ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ʼ ಎಂಬ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಾರೆ.

ಈಗಾಗಲೇ ಈ ದುರಂತದಲ್ಲಿ ಶಂಕರಪ್ಪ (27), ಸಿಂಧು (25) ಸೋಮವಾರ ಮೃತಪಟ್ಟಿದರು. ಮಣಿಪಾಲ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ (26) ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.