Home News ಕೊಡಗು: ಅನ್ಯ ಧರ್ಮದ ಯುವತಿಯರ ಜೊತೆ ರಾಸಲೀಲೆ ಮಾಡಿದ ಯುವಕ, ವಿಡಿಯೋ ವೈರಲ್‌

ಕೊಡಗು: ಅನ್ಯ ಧರ್ಮದ ಯುವತಿಯರ ಜೊತೆ ರಾಸಲೀಲೆ ಮಾಡಿದ ಯುವಕ, ವಿಡಿಯೋ ವೈರಲ್‌

Hindu neighbor gifts plot of land

Hindu neighbour gifts land to Muslim journalist

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರ ಜೊತೆ ರಾಸಲೀಲೆ ನಡೆಸಿ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್‌ ಸವದ್‌ ಎನ್ನುವ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್‌ ಸವದ್‌ ಬೆಂಗಳೂರಿನ ಸಂಪಿಗೆಹಳ್ಳಿಯ ಯೆನಪೋಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿ ಎನ್ನಲಾಗಿದೆ.

ಆರೋಪಿಯು ವಿವಿಧ ಯುವತಿಯರೊಂದಿಗೆ ಕಾಮಕೇಳಿ ನಡೆಸಿ, ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಇದು ಜಿಲ್ಲೆಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್‌ ಆದ ವಿಡಿಯೋದಲ್ಲಿ ಕೆಲ ಯುವತಿಯರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದು, ಕೆಲವರು ರಾಜಕೀಯ ಪಕ್ಷದ ಎಲ್ಲಾ ಮಟ್ಟದ ನಾಯಕರ ಪುತ್ರಿಯರು ಎನ್ನುವ ಆರೋಪ ಇದೆ. ಈ ಕಾರಣದಿಂದ ಈ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ಈ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಸವದ್ ಸ್ನೇಹಿತರೇ ಈ ವಿಡಿಯೋಗಳನ್ನು ವೈರಲ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಪ್ರಕರಣದ ತನಿಖೆಯನ್ನು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದ್ದು, ಸತ್ಯಾಂಶ ಬಯಲಿಗೆಳೆಯಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಹೇಳಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಮೊಹಮ್ಮದ ಸವದ್‌ ಕಾಮಕೇಳಿ ವಿಡಿಯೋ ವೈರಲ್‌ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.