

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿ ಒಟ್ಟು ಸೇರಿ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ನಡೆಯುವ ಕಾಲ್ನಡಿಗೆ ಜಾಥದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿ ಕಾಂಗ್ರೆಸ್ ನಾಯಕರು ಪ್ರಕಟಣೆ ಹೊರಡಿಸಿದ್ದಾರೆ.
MGNREGA ಮರಳಿ ತರೋಣ ಕೋಟ್ಯಾಂತರ ಜನರ ಉದ್ಯೋಗದ ಹಕ್ಕನ್ನು ರಕ್ಷಿಸೋಣ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಆಂದೋಲನವು ನಡೆಯಲಿದೆ.
ಸತೀಶ್ ಕೆ ಕಾಶಿಪಟ್ನ, ಅಧ್ಯಕ್ಷರು, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಶ್ರೀ ನಾಗೇಶ್ ಕುಮಾರ್ ಗೌಡ ಅಧ್ಯಕ್ಷರು, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ, ಬೆಳ್ತಂಗಡಿ ಇವರು ಪ್ರಕಟಣೆ ಹೊರಡಿಸಿದ್ದಾರೆ.













