Home News ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜೂ.1 ರವರೆಗೆ ಅವಕಾಶ: ಉಡುಪಿ ಜಿಲ್ಲಾಧಿಕಾರಿ

ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜೂ.1 ರವರೆಗೆ ಅವಕಾಶ: ಉಡುಪಿ ಜಿಲ್ಲಾಧಿಕಾರಿ

Hindu neighbor gifts plot of land

Hindu neighbour gifts land to Muslim journalist

ಉಡುಪಿ: ಸಿಟಿ ಬಸ್‌ಗಳಿಗೆ ಬಾಗಿಲನ್ನು ಕಡ್ಡಾಯವಾಗಿ ಅಳವಡಿಕೆ ಮಾಡಲು ಜೂ.1 ರವರೆಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್‌ಗಳಿಗೆ ಬಾಗಿಲುಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿದೆ. ಮಾರ್ಚ್‌ ತಿಂಗಳವರೆಗೂ ಶಾಲೆ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಬಸ್‌ ಸೇವೆ ವ್ಯತ್ಯಯ ಆಗಬಾರದು ಹಾಗೂ ಎಲ್ಲಾ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಸೀಮಿತ ಸಂಖ್ಯೆಯಲ್ಲಿ ಗ್ಯಾರೇಜ್‌ ಇರುವ ಕಾರಣ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಜೂ.1 ರ ವರೆಗೆ ಸಮಯವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜೂ.1 ರ ನಂತರವೂ ಬಸ್‌ಗಳಿಗೆ ಬಾಗಿಲನ್ನು ಅಳವಡಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ವಿದ್ಯಾರ್ಥಿಗಳು ಫುಟ್‌ ಬೋರ್ಡ್‌ನಲ್ಲಿ ನಿಂತು ಪ್ರಯಾಣ ಮಾಡದಂತೆ ಬಾಗಿಲನ್ನು ಅಳವಡಿಸುವವರೆಗೆ ಅರಿವು ಮೂಡಿಸುವ ಕೆಲಸ ಮಾಡಲು ನಿರ್ದೇಶನ ಮಾಡಲಾಯಿತು. ಎಫ್‌ಸಿ ನವೀಕರಣಕ್ಕೆ ಬಾಕಿ ಇರುವ ಬಸ್‌ಗಳಿಗೆ ಜೂ.1 ರೊಳಗಾಗಿ ಬಾಗಿಲನ್ನು ಅಳವಡಿಸುವ ಷರತ್ತಿಗೊಳಪಟ್ಟು ಅರ್ಹತೆ ಇದ್ದಲ್ಲಿ ಎಫ್‌ ಸಿ ನವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಈ ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌, ಆರ್‌ಟಿಒ ಅಧಿಕಾರಿಗಳು ಹಾಗೂ ಬಸ್‌ ಮಾಲಕರು, ಬಸ್‌ ಮಾಲಕರ ಸಂಘದ ಪ್ರತಿನಿಧಿಗಳು ಭಾಗವಹಿಸಿದ್ದರು.