

ಚಿಕ್ಕಮಗಳೂರು: ಹಿಂದೂ ಸಮಾಜೋತ್ಸವದ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬ್ಲೇಡ್‌ನಿಂದ ಹರಿದು ಹಾಕಿದ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ಬೋಳೂರು ಕ್ರಾಸ್ ಬಳಿ ನಡೆದಿದೆ. ಹಿಂದೂ ಮುಖಂಡರು ಈ ಘಟನೆಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮರೀಗೆಬೈಲು ಗ್ರಾಮದಲ್ಲಿ ಜ.31 ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.28 ರ ರಾತ್ರಿ ಯುವಕರು ಫ್ಲೆಕ್ಸ್ ಹಾಕಿದ್ದರು. ನಡುರಾತ್ರಿ 12.30 ರ ತನಕೂ ಯುವಕರು ಬ್ಯಾನರ್ ಬಳಿಯೇ ಇದ್ದು, ತೆರಳಿದ್ದರು. ಇಂದು ಮುಂಜಾನೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.
ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಅಧ್ಯಕ್ಷ ಪ್ರದೀಪ್ ಚೋಳರಮನೆ ಶೃಂಗೇರಿ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.













