

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ.
ಉದ್ಯಮಿ ಸಾವಿಗೆ ನಿಖರ ಕಾರಣ ತಿಳಿದು ಬರದ ಕಾರಣ ಅಶೋಕ ನಗರ ಪೊಲೀಸರು ಬಿಎನ್‌ಎಸ್ 174ಸಿ ಅಡಿಯಲ್ಲಿ ಯುಡಿಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಿಜೆ ರಾಯ್ ಆತ್ಮಹತ್ಯೆಗೆ ಸಂಬಂಧ ತನಿಖೆ ನಡೆಸುವಂತೆ ಕಾನ್ಫಿಡೆಂಟ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಟಿ.ಎ.ಜೋಸೆಫ್ ಅವರು ದೂರನ್ನು ನೀಡಿದ್ದಾರೆ. ದೂರಿನಲ್ಲಿ ಐಟಿ ಅಧಿಕಾರಿಗಳ ವಿರುದ್ಧ ಜೋಸೆಫ್ ಯಾವುದೇ ಆರೋಪ ಮಾಡಿಲ್ಲ. ಹೀಗಾಗಿ ಅಶೋಕ್ ನಗರ ಪೊಲೀಸರು ಅಸಹಜ ಸಾವು ಎಂದು ತನಿಖೆ ನಡೆಸುತ್ತಿದ್ದಾರೆ.













