ಗುರುವಾರ, 29 ಅಕ್ಟೋಬರ್ 2026
Trending

Maharastra : ಮಹಾರಾಷ್ಟ್ರದಲ್ಲಿ ಬೆಚ್ಚಿ ಬೀಳಿಸೋ ಘಟನೆ- 350ಕ್ಕೂ ಹೆಚ್ಚು ವಿಡಿಯೋ ಇಟ್ಟುಕೊಂಡು 180ಕ್ಕೂ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ!! ಆರೋಪಿ ಅರೆಸ್ಟ್

Advertisement
Advertisement

Maharastra : ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯರನ್ನು ವಂಚಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಘೋರ ಪ್ರಕರಣವೊಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಯಲಿಗೆ ಬಂದಿದೆ. 

Sponsored

ಹೌದು, ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಜಾಲತಾಣಗಳ ಮೂಲಕ ಅಪ್ರಾಪ್ತ ಬಾಲಕಿಯರನ್ನು ಸಂಪರ್ಕಿಸುತ್ತ ಸುಮಾರು 180ಕ್ಕೂ ಹೆಚ್ಚು ಬಾಲಕಿಯರನ್ನು ಬಲಿಪಶು ಮಾಡಿ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಆರೋಪಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ.  

Advertisement
Advertisement

ಅಮರಾವತಿ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಸಂತ್ರಸ್ತ ಬಾಲಕಿಯೊಬ್ಬಳ ದೂರಿನಿಂದ ಈ ಪ್ರಕರಣ ಬಯಲಿಗೆ ಬಂದಿದೆ. ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಏಳು ಮೊಬೈಲ್ ವಶಪಡಿಸಿಕೊಂಡಿರುವ ಪೊಲೀಸರು ಶಾಕ್​ ಆಗಿದ್ದಾರೆ. ಅದರಲ್ಲಿ ಸುಮಾರು 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಪತ್ತೆ ಹೆಚ್ಚಿದ್ದಾರೆ.

Advertisement

ವಿಡಿಯೋ ಇಟ್ಟುಕೊಂಡು ಆರೋಪಿ ಅನೇಕ ಬಾಲಕಿಯರಿಗೆ ಬೆದರಿಕೆ ಹಾಕಿದ್ದು, ಮತ್ತು ವೇಶ್ಯವಾಟಿಕೆ ದಂಧೆಗೆ ಒತ್ತಾಯಿಸಿದ್ದ ಆರೋಪ ಕೇಳಿ ಬಂದಿದೆ. ಇನ್ನೂ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Advertisement