ಭಾನುವಾರ, 25 ಅಕ್ಟೋಬರ್ 2026
Trending

ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ: ಅಸ್ಫುಲ್ಲಾ ಮಲ್ಲಿಕ್‌ಗೆ 10 ದಿನ ಪೊಲೀಸ್ ಕಸ್ಟಡಿ!

ಬೆಂಗಳೂರು: ಬೆಂಗಳೂರಿನಲ್ಲಿ ಬಂಧಿಸಲಾದ ಶಂಕಿತ ಅಸ್ಫುಲ್ಲಾ ಮಲ್ಲಿಕ್‌ನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಹೆಬ್ಬಗೋಡಿ ಪೊಲೀಸರು ಇದೀಗ ಆತನನ್ನು ವಿಚಾರಣೆ ನಡೆಸಲಿದ್ದಾರೆ.

Sponsored

ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ ಶ್ರೀರೂಪಾ

 

ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಅಸ್ಫುಲ್ಲಾ ಮಲ್ಲಿಕ್‌ನನ್ನು ಬಂಧಿಸಿತ್ತು. ಪಶ್ಚಿಮ ಬಂಗಾಳ ಮೂಲದ ಆತ ಜಿಗಣಿಯ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪಾಕಿಸ್ತಾನ ಮೂಲದ ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಅಸ್ಫುಲ್ಲಾ ಮೇಲಿದ್ದು, ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ ಶ್ರೀರೂಪಾ

ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಕಸ್ಟಡಿ ಅವಧಿಯಲ್ಲಿ ಆತನ ಸಂಪರ್ಕಗಳು, ದಾಳಿಯ ಸಂಚು ಹಾಗೂ ಇತರ ಸಹಚರರ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.