ಭಾನುವಾರ, 25 ಅಕ್ಟೋಬರ್ 2026

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ; ಪ್ರಯಾಣಿಕರಲ್ಲಿ ಆತಂಕ

Indigo flight ticket discount
Image source: Hindustan Times

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

Sponsored

ನಾಗೇಂದ್ರ ರಾಜೀನಾಮೆ ಘೋಷಣೆ ಬೆನ್ನಲ್ಲೇ ಡಿಕೆಶಿ ಅಚ್ಚರಿ ಹೇಳಿಕೆ: ‘ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು’

Marriage AdMarriage AdSponsored

ಲಖನೌದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ಸಂಸ್ಥೆಯ 6E-232 ವಿಮಾನದಲ್ಲಿ ಪ್ರಯಾಣದ ವೇಳೆ ಬೆದರಿಕೆ ಪತ್ರ ಪತ್ತೆಯಾಗಿದೆ. ವಿಮಾನದೊಳಗೆ ಪತ್ರ ಕಂಡುಬಂದ ಹಿನ್ನೆಲೆಯಲ್ಲಿ ಸಿಬ್ಬಂದಿ ತಕ್ಷಣ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೈಲಟ್‌ ಈ ಬಗ್ಗೆ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ರವಾನಿಸಿದ್ದಾರೆ.
ವಿಮಾನ ಬೆಂಗಳೂರಿಗೆ ಬಂದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರನ್ನು ಕೆಳಗಿಳಿಸಿ, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಯಿತು. ಶ್ವಾನದಳ, ಸಿಐಎಸ್‌ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರ ತಪಾಸಣೆ ನಡೆಸಿದ್ದಾರೆ.

ನಾಗೇಂದ್ರ ರಾಜೀನಾಮೆ ಘೋಷಣೆ ಬೆನ್ನಲ್ಲೇ ಡಿಕೆಶಿ ಅಚ್ಚರಿ ಹೇಳಿಕೆ: ‘ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು’

ಬಾಂಬ್ ಬೆದರಿಕೆ ನಿಜವೇ ಅಥವಾ ಕಿಡಿಗೇಡಿತನದ ಕೃತ್ಯವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಬೆದರಿಕೆ ಪತ್ರದ ಮೂಲ ಹಾಗೂ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು