ಭಾನುವಾರ, 25 ಅಕ್ಟೋಬರ್ 2026
Trending

ಮಂಗಳೂರು: ರಿಕ್ಷಾ-ಬೈಕ್‌ ಡಿಕ್ಕಿ-ಸವಾರ ಸಾವು

ಬಂಟ್ವಾಳ: ರಿಕ್ಷಾ ಹಾಗೂ ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಿಂದ ಬೈಕ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆ ಬಸ್‌ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ.

Sponsored

ನಂದಾವರದಲ್ಲಿ ಗ್ಯಾರೇಜ್‌ ನಡೆಸುತ್ತಿದ್ದ ಮುಹಮ್ಮದ್‌ ರಶಿಕ್‌ (25) ಮೃತ ಯುವಕ.

ರಶೀಕ್‌ ಮೆಲ್ಕಾರ್‌ನಲ್ಲಿ ಕೆಲಸ ಮುಗಿಸಿ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯಲ್ಲಿ ಮುಡಿಪು ಕಡಗೆ ಬೈಕ್‌ನಲ್ಲಿ ತೆರಳುತ್ತಿದ್ದು, ಆ ಸಮಯದಲ್ಲಿ ರಾತ್ರಿ ಎಂಟು ಗಂಟೆಗೆ ಪೆಲತ್ತಕಟ್ಟೆ ಬಸ್‌ ನಿಲ್ದಾಣದ ಬಳಿ ಮುಡಿಪು ಕಡೆಯಿಂದ ಮೆಲ್ಕಾರ್‌ ಕಡೆಗೆ ರಿಕ್ಷಾ ಬರುತ್ತಿತ್ತು. ಈ ವೇಳೆ ರಿಕ್ಷಾ ಚಾಲಕ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿಕೊಂಡು ಬಂದು ರಶೀಕ್‌ ಸಂಚರಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ರಶೀಕ್‌ ಅಪಘಾತದ ತೀವ್ರತೆ ತಲೆ ಹಾಗೂ ಹಣೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಅವರನ್ನು ಖಾಸಗಿ ವಾಹನದಲ್ಲಿ ದೇರಳಕಟ್ಟೆಯ ಖಾಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಪರೀಕ್ಷಿಸಿದ ವೈದ್ಯರು ರಶೀಕ್‌ ಮೃತಪಟ್ಟರುವುದಾಗಿ ತಿಳಿಸಿದ್ದಾರೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.