G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ: ಆರೋಗ್ಯ ಇಲಾಖೆ ಕಠಿಣ ಕ್ರಮ

ಬೆಂಗಳೂರು: ಅರ್ಹತೆ ಹಾಗೂ ವೈದ್ಯಕೀಯ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ರಾಜ್ಯ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. 2024ರಿಂದ ರಾಜ್ಯಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಪತ್ತೆಯಾದವರಲ್ಲಿ ಕೆಲವರು ಹಿಂದೆ ನರ್ಸ್, ಕಂಪೌಂಡರ್, ಲ್ಯಾಬ್ ಅಸಿಸ್ಟೆಂಟ್ ಹಾಗೂ ಕ್ಲಿನಿಕ್ ಸಹಾಯಕರಾಗಿ ಕೆಲಸ ಮಾಡಿದ್ದವರು ಎನ್ನಲಾಗಿದೆ. ಕಲಬುರಗಿ, ರಾಯಚೂರು, ಧಾರವಾಡ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿವೆ.
ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ, ಪೊಲೀಸ್ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನೊಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗಿದೆ. KPME ಕಾಯ್ದೆಯಡಿ ₹25 ಸಾವಿರದಿಂದ ₹5 ಲಕ್ಷದವರೆಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.
ಚಿಕಿತ್ಸೆ ಪಡೆಯುವ ಮುನ್ನ ವೈದ್ಯರ ವಿದ್ಯಾರ್ಹತೆ ಹಾಗೂ KMC ನೋಂದಣಿ ಸಂಖ್ಯೆಯನ್ನು ಪರಿಶೀಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

Sponsored