ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.
ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರನ್ನು ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡಲು ಯತ್ನ ಮಾಡಿದಾಗ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮ ಬಸ್ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.
ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕೂಡಲೇ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸು ದಾಖಲಿಸಲಾಗಿದೆ.



