ಭಾನುವಾರ, 25 ಅಕ್ಟೋಬರ್ 2026
Trending

2029ಕ್ಕೆ NDA ಆಡಳಿತದ 21 ರಾಜ್ಯಗಳಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿ – ಅಮಿತ್ ಶಾ

2029ರ ವೇಳೆಗೆ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಘೋಷಣೆ ಮಾಡಿದ್ದಾರೆ. 

Sponsored

ಮುಂಬೈನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಮದುವೆ, ವಿಚ್ಛೇದನ, ಆಸ್ತಿ ಹಕ್ಕು, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರ ಸೇರಿದಂತೆ ವೈಯಕ್ತಿಕ ಕಾನೂನುಗಳಿಗೆ ಧರ್ಮಭೇದವಿಲ್ಲದೆ ಒಂದೇ ರೀತಿಯ ಕಾನೂನು ರೂಪಿಸುವ ಉದ್ದೇಶವನ್ನು ಏಕರೂಪ ನಾಗರಿಕ ಸಂಹಿತೆ ಹೊಂದಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗಿದೆ ಎಂದರು. 

ಅಲ್ಲದೆ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮತ್ತು ಆಪರೇಷನ್ ಸಿಂಧೂರ್ ನಂತಹ ಕಾರ್ಯಾಚರಣೆಗಳು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಸ್ಥಾಪಿಸಿವೆ. ವಿವಿಧ ವಲಯಗಳಲ್ಲಿ ಭದ್ರತೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ ವೇಳೆ, ಅಮಿತ್ ಶಾ ಅವರು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರೆಗೆ ರಾಷ್ಟ್ರವ್ಯಾಪಿ “ಸೇವಾ ಸಂಕಲ್ಪ ಅಭಿಯಾನ” (ಸೇವಾ ಸಂಕಲ್ಪ ಅಭಿಯಾನ) ವನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು.