ಗುವಾಹಾಟಿ: ಪತ್ನಿಯ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
Sponsoredಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ ಹತಿಗಾಂವ್ ಠಾಣೆ ಪೊಲೀಸರು ಆರೋಪಿಯನ್ನು ಗುವಾಹಾಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದು, ಬಳಿಕ ಠಾಣೆಗೆ ವಾಪಸ್ ಕರೆತರುತ್ತಿದ್ದ ವೇಳೆಈ ಘಟನೆ ನಡೆದಿದೆ.
ಕೂಡಲೇ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಆರೋಪಿಯ ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




