ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದ್ದು, ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
Sponsoredಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
Marriage AdSponsored




