ಐತಿಹಾಸಿಕ ಮಹತ್ವದ ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರ: ಬರಲಿದ್ದಾರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರವು ಐತಿಹಾಸಿಕ ಮಹತ್ವದ ಕ್ಷೇತ್ರ. ಇಲ್ಲಿ ಫೆಬ್ರವರಿ 24 ರಿಂದ ಮಾ. 2ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮದಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯದ ಸನ್ಮಾನ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದ ಕಚೇರಿಯಲ್ಲಿ ಆಮಂತ್ರಣ ಪತ್ರಿಕೆ ನೀಡಲಾಯಿತು.

 

ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಜೊತೆ ಗೆಜ್ಜೆಗಿರಿ ಕ್ಷೇತ್ರದ ಕುರಿತು ಸಮಾಲೋಚನೆ ನಡೆಸಲಾಯಿತು.

ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಮೂಲ ಸ್ಥಾನದಲ್ಲಿ ನಡೆಯುತ್ತಿರುವ ಪುನರುತ್ಥಾನ ಯೋಜನೆಯ ಕುರಿತು ಮುಖ್ಯಮಂತ್ರಿಗಳಿಗೆ ಸವಿವರವಾಗಿ ವಿವರಿಸಲಾಯಿತು. ಕ್ಷೇತ್ರದ ಬಗ್ಗೆ ವಿವರಗಳನ್ನು ತಿಳಿದುಕೊಂಡ ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದರು.

ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆ ಗುತ್ತು ಹೊರಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ರವಿ ಕಕ್ಯಪದವು, ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಮಂಜುನಾಥ ಸಾಲ್ಯಾನ್ ಬೆಳ್ತಂಗಡಿ , ದೀಪಕ್ ಸಜಿಪ, ನಾರಾಯಣ ಪೂಜಾರಿ ಕುರಿಕ್ಕಾರ ಉಪಸ್ಥಿತರಿದ್ದರು.

Leave A Reply

Your email address will not be published.