ಯಡಿಯೂರಪ್ಪ ಬೆಂಬಲಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

Share the Article

ಕರ್ನಾಟಕ ರಾಜ್ಯ ಬಿಜೆಪಿಯ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಚರ್ಚೆ ಕುರಿತಂತೆ ದೊಡ್ಡ ತಿರುವೊಂದು ಸಿಕ್ಕಿದೆ.

ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರನ್ನು ಪ್ರಶಂಸಿದ್ದಾರೆ.

ಪತ್ರಕರ್ತರು ಕರ್ನಾಟಕ ರಾಜಕೀಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, “ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಉತ್ತಮವಾಗಿ ನಡೆಯುತ್ತಿದೆ. ಉಳಿದಂತೆ, ಯಡಿಯೂರಪ್ಪನವರು ಕೂಡ ಎಲ್ಲ ವಿಷಯಗಳನ್ನೂ ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ” ಎಂದರು.

ರಾಜಕೀಯ ಅಸ್ಥಿರತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, ನಿಮಗೆ ಹಾಗೆ ಅನಿಸುತ್ತಿರಬಹುದು. ಆದರೆ ನಮಗೆ ಬದಲಾವಣೆ ಏಮು ಅನಿಸುತ್ತಿಲ್ಲ ಎಂದರು.

Leave A Reply