Home News ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ದ.ಕ.ದ ಗಡಿಭಾಗದಲ್ಲಿ ಕಟ್ಟೆಚ್ಚರ, ಹೊಸ‌ ಮಾರ್ಗಸೂಚಿ ರಚನೆ- ಡಿಸಿ

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ದ.ಕ.ದ ಗಡಿಭಾಗದಲ್ಲಿ ಕಟ್ಟೆಚ್ಚರ, ಹೊಸ‌ ಮಾರ್ಗಸೂಚಿ ರಚನೆ- ಡಿಸಿ

Hindu neighbor gifts plot of land

Hindu neighbour gifts land to Muslim journalist

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಪರಿಣಾಮ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಹೆಚ್ಚುತ್ತಿದೆ. ಇದರ ನಿಯಂತ್ರಣಕ್ಕಾಗಿ ಮುಂದಿನೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಶುಕ್ರವಾರ ತಲಪಾಡಿ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ, ಜಿಲ್ಲೆಗೆ ಬರುವವರ ತಪಾಸಣೆ ಕಾರ್ಯ ಪರಿಶೀಲಿಸಿ ಮಾತನಾಡಿದ ಅವರು, ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಕೋವಿಡ್‌ ನೆಗೆಟಿವ್‌ ವರದಿ ಇರುವವರಿಗೆ ದ.ಕ. ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಪ್ರಥಮ ಅಲೆಯ ಸಂದರ್ಭ ದಿನನಿತ್ಯ ಸಂಚರಿಸುವವರಿಗೆ ಪಾಸ್‌ ವ್ಯವಸ್ಥೆ ಮಾಡಲಾಗಿತ್ತು. ಅದರ ಮರು ಅನುಷ್ಠಾನಕ್ಕೆ ಚಿಂತನೆ ಮಾಡಲಾಗುವುದು ಎಂದರು.

ಜಿಲ್ಲೆಯ ಗಡಿಯ 4 ಕೇಂದ್ರಗಳಲ್ಲಿ ಕೇರಳದಿಂದ ಬರುವವರ ತಪಾಸಣೆಗೆ ಚೆಕ್‌ ಪಾಯಿಂಟ್‌ ಆರಂಭಿಸಲಾಗಿದೆ. ಒಳರಸ್ತೆಗಳಲ್ಲೂ ಚೆಕ್‌ಪಾಯಿಂಟ್‌ ಹಾಕಲು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಶನಿವಾರ ಜಿಲ್ಲಾ ವಿಪತ್ತು ಪ್ರಾ ಧಿಕಾರದ ಸಭೆ ನಡೆಯಲಿದ್ದು, ಅಂತಾರಾಜ್ಯ ವಾಹನ ಸಂಚಾರ ಸಹಿತ ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ನಿಯಮ ಹೇರುವ ಕುರಿತು ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿಯನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.