ಉಪ್ಪಿನಂಗಡಿ| ಮಹಿಳೆಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ

Share the Article

ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ನಿವೃತ್ತ ಯೋಧನನ್ನು ಬಂಧಿಸಿರುವ ಘಟನೆ
ಉಪ್ಪಿನಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಜಯಕುಮಾರ್‌ ಪೂಜಾರಿ ಎಂದು ಗುರುತಿಸಲಾಗಿದೆ.

ಆರೋಪಿ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಶಬರಿಗಿರಿ ಮನೆ ನಿವಾಸಿ ಶಶಿಕುಮಾರ್ ಪಿಳ್ಳೆ ಅವರ ಪತ್ನಿ ಆಶಾ ಎಂಬುವವರಿಗೆ ಹಲ್ಲೆ ನಡೆಸಿದ್ದಾನೆ. ಅವರಿಗೆ ಕಲ್ಲೆಸೆದು ಕಣ್ಣಿಗೆ ಗಾಯ ಮಾಡಿ, ಅವ್ಯಾಚ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆಶಾ ಅವರು ಪುತ್ತೂರು ಡಿವೈಎಸ್ಪಿ ಅವರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಹಾಗಾಗಿ ಆರೋಪಿಯನ್ನು ಇದೀಗ ಬಂಧಿಸಲಾಗಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave A Reply