ಕಾರಿನ ಡಿಕ್ಕಿಯಲ್ಲಿ ಲಾಕ್ ಮಾಡಿ ಬೆಂಕಿ ಹಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Share the Article

ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿರುವ ಮೇದಕ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶ್ರೀನಿವಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

Leave A Reply