ಬಾಲಕಿಯ ಅತ್ಯಾಚಾರ ಪ್ರಕರಣ | ಆರೋಪಿ ಸಂಬಂಧಿಕನನ್ನು ಬಂಧಿಸಿದ ಪೊಲೀಸರು

Share the Article

ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪದಲ್ಲಿ ಆಕೆಯ ಚಿಕ್ಕಪ್ಪನನ್ನು ಪೊಕ್ಸೋ ಕಾಯ್ದೆಯಡಿ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಕುಮಾರ್ (30) ಅತ್ಯಾಚಾರವೆಸಗಿದ ಆರೋಪಿ ಎಂದು ಗುರುತಿಸಲಾಗಿದೆ.

ಸೋಮವಾರ ಶಾಲೆಯಿಂದ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಬಾಲಕಿಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದು ಆಗ ಜೊತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿದ್ದಾಳೆ. ಈ ವೇಳೆ ಆರೋಪಿ ತನ್ನ ಅಣ್ಣನ ಮಗಳನ್ನೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave A Reply