ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

Share the Article

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.

ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಆದರೆ ಈ ಬಗ್ಗೆ ಕಂಪೆನಿ ಯಾವುದೇ ಖಚಿತ ಮಾಹಿತಿ ವ್ಯಕ್ತಪಡಿಸಿಲ್ಲ. ಕಂಪೆನಿಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಭಾರೀ ಪ್ರಮಾಣದ ಹೊಗೆ ಪರಿಸರದಲ್ಲಿ ಹರಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave A Reply