ಆ.15 ರ ಬಳಿಕ ಕರ್ನಾಟಕದಲ್ಲಿ ಕಠಿಣ ಕೋವಿಡ್ ನಿಯಮಾವಳಿ ಜಾರಿ – ಆರ್.ಅಶೋಕ್
ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದ್ದಾರೆ.
ಇಂದು ಪತ್ರಕರ್ತರ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎಂದರು.
ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಶಾಲೆಗಳು ಇದೆ ಆ.23 ರಂದು ಆರಂಭಿಸುವುದಾಗಿ ಸರ್ಕಾರ ಘೋಷಿಸಿದೆ. ಆದರೆ, ಕೋವಿಡ್ ಮೂರನೇ ಅಲೆಯ ಭೀತಿ ಶುರುವಾಗಿದೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ ಎಂದರು.