ಕುಂದಾಪುರ ಸರಕಾರಿ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Share the Article

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ಸರಕಾರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮೃತ ರವಿಚಂದ್ರ ಕುಲಾಲ್ ವಕ್ವಾಡಿಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುದರ ಬಗ್ಗೆ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply