ದಕ್ಷಿಣ ಕನ್ನಡ : ಕೊರೊನಾ ಹೆಚ್ಚಳ | ಪ್ರೌಢಶಾಲೆ ಆರಂಭ ಆ.28ರವರೆಗೆ ಮುಂದೂಡಿಕೆ

Share the Article

ರಾಜ್ಯ ಸರಕಾರ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಏರಿಕೆಯಲ್ಲಿರುವ ಕಾರಣ ಈ ಜಿಲ್ಲೆಯಲ್ಲಿ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಟಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಶಿಕ್ಷಕರು ಆನ್‍ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply