Home latest ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ.

ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದು, ದುಷ್ಕೃತ್ಯದ ಬಗ್ಗೆ ಬಾಯ್ಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.

ಸಂತ್ರಸ್ತೆ ತನ್ನ ಪತಿಯೊಂದಿಗೆ ಗಾಜಿಯಾಬಾದ್ ಪ್ರದೇಶದಲ್ಲಿ ವಾಸವಾಗಿದ್ದರು. ಆಕೆಗೆ ಕೆಲವು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಫೋನ್‌ ಕರೆ ಬಂದಿದ್ದು, ತನ್ನ ಹೆಸರು ರೋಹಿತ್ ಎಂದು ಹೇಳಿದ ಆತ ಕೆಲಸದ ಬಗ್ಗೆ ಮಾಹಿತಿ ಕೇಳಿದ್ದಾನೆ. ಹೀಗೆ ಮಾತನಾಡುತ್ತಾ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾನೆ.

ಆಗಸ್ಟ್‌ 16 ರಂದು ಕೆಲಸದ ಕಾರಣ ಆತನನ್ನು ಭೇಟಿ ಮಾಡಲು ಮಹಿಳೆ ಹೋಗಿದ್ದಾಳೆ. ಆರೋಪಿ ರೋಹಿತ್‌ ಮಹಿಳೆ ಭೇಟಿಗಾಗಿ ಗಾಜಿಯಾಬಾದ್‌ನ ಲಾಲ್ ಕೌನ್ ಪ್ರದೇಶಕ್ಕೆ ಬಂದವನು ಅಲ್ಲಿಂದ ನೇರವಾಗಿ ದೆಹಲಿಗೆ ಆಕೆಯನ್ನು ಕರೆ ತಂದಿದ್ದಾನೆ.

ಕಾರಿನಲ್ಲಿ ಇಬ್ಬರು ವ್ಯಕಿಗಳಿದ್ದು, ಆತನೊಂದಿಗೆ ಮತ್ತೋರ್ವ ವ್ಯಕ್ತಿಯೂ ಇದ್ದ. ಈ ವೇಳೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಕೃತ್ಯದ ಬಗ್ಗೆ ಯಾರಿಗಾದರೂ ಬಾಯಿ ಬಿಟ್ಟರೆ ಹತ್ಯೆ ಮಾಡುವ ಬೆದರಿಕೆ ಹಾಕಿ, ಆರೋಪಿಗಳು ಬಳಿಕ ಶಾಸ್ತ್ರಿ ಪಾರ್ಕ್‌ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.