ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮತ್ತೊಂದು ನಿರ್ಭಯಾ ರೀತಿಯ ಪ್ರಕರಣ | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Share the Article

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ.

ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಯುವತಿ, ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ ಬಂದಿದ್ದ ವೇಳೆ ಗ್ಯಾಂಗ್ ರೇಪ್ ನಡೆದಿದೆ.

ಹೊರ ವಲಯದಲ್ಲಿ ಮದ್ಯಪಾನ ಮಾಡುತ್ತಿದ್ದ 6 ಮಂದಿ, ಈ ಜೋಡಿಯನ್ನು ಕಂಡು ಮೊದಲು ಪ್ರಿಯಕರನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದೆ. ನಂತರ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿದೆ ಎಂದು ತಿಳಿದುಬಂದಿದೆ.

ಯುವತಿ ಹಾಗೂ ಆಕೆಯ ಪ್ರಿಯಕರ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೃತ್ಯ ನಡೆದಿರುವ ಬಗ್ಗೆ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸುತ್ತಿದ್ದಾರೆ. ಈ ಘಟನೆ ಸಂಬಂಧ ಈಗಾಗಲೇ 4-5 ಮಂದಿಯ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply