ಮಂಗಳೂರು |ಪತ್ರಕರ್ತರ ರಾಜ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಪತ್ರಕರ್ತರ ಸಮ್ಮೆಳನ ರಾಜ್ಯಕ್ಕೆ ಮಾದರಿ ಸಮ್ಮೇಳನವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾರ್ಚ್ 7 ಮತ್ತು 8 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸಾಕಷ್ಟು ಮಂದಿ ಕರಾವಳಿಯ ಪತ್ರಕರ್ತರು ಖ್ಯಾತಿಯನ್ನು ಪಡೆದವರಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ನಮ್ಮಲ್ಲೂ ಕುತೂಹಲವನ್ನು ಮೂಡಿಸಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ,ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮದನ ಗೌಡ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದ ರ್ಭದಲ್ಲಿ , ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ಪಿಲಿಕುಳ ನಿಸರ್ಗಧಾಮದ ಆಡಳಿತ ನಿರ್ದೇಶಕಿ ಮೇಘನಾ ಆರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ಜಯರಾಮ ಶೇಖ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ,ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪದಾಧಿಕಾರಿಗಳಾದ ಪುಷ್ಪರಾಜ್ ಬಿ ಎನ್,ಜೀತೇಂದ್ರ ಕುಂದೇಶ್ವರ ,ಭಾಸ್ಕರ ರೈ ಕಟ್ಟ ,ದಯಾನಂದ ಕುಕ್ಕಾಜೆ ,ರಾಜೇಶ್ ಶೆಟ್ಟಿ ,ಪತ್ರಕರ್ತ ಸುಖ್ ಪಾಲ್ ಪೊಳಲಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು .

Leave A Reply

Your email address will not be published.