ಕೃಷ್ಣನ ಜನ್ಮಸ್ಥಳ ಮಥುರೆಯಲ್ಲಿ ಮಾಂಸ,ಮದ್ಯ ಮಾರಾಟ ನಿಷೇಧಿಸಿದ ಯೋಗಿ ಆದಿತ್ಯನಾಥ್

Share the Article

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ ಮದ್ಯ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಲಕ್ನೋದಲ್ಲಿ ನಡೆದ ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಮಾತನಾಡುತ್ತಿದ್ದರು.

“ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಹಾಗೂ ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಜನರನ್ನು ಗುರುತಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ’ ಎಂದು ಅವರು ಹೇಳಿದರು.

ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಮರುಕಳಿಸುವ ಸಲುವಾಗಿ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದರು. ಹಾಲಿನ ಉತ್ಪಾದನೆ ಮೂಲಕ ಹೆಸರಾಗಿರುವ ಮಥುರಾದಲ್ಲಿ ಹಾಲಿನ ವ್ಯಾಪಾರ ಉತ್ತಮವಾದುದು ಎಂದು ಅವರು ಹೇಳಿದರು.

Leave A Reply