ಪಡಿತರ ಚೀಟಿದಾರರ ಇ-ಕೆವೈಸಿಗೆ ಸೆ.10ರ ವರೆಗೆ ಅಂತಿಮ ಅವಕಾಶ | ಇ-ಕೆವೈಸಿ ಮಾಡದ ಪಡಿತರ ಚೀಟಿ ರದ್ದು
ಮಂಗಳೂರು : ಸೆಪ್ಟಂಬರ್ 1 ರಿಂದ 10 ವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನಡೆಸಲಾಗುತ್ತಿದೆ.
2021ರ ಸೆಪ್ಟಂಬರ್ ಮಾಹೆಯಲ್ಲಿ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿದ್ದು, ನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲಾಗುವುದು.
ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದೆ.
ಜಿಲ್ಲೆಯಲ್ಲಿ ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು.
2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ತಿದ್ದುಪಡಿ ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ(ಬಿಪಿಎಲ್) ಹಾಗೂ ಆದ್ಯತೇತರ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ಉಚಿತವಾಗಿ ಮಾಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
Wow, marvelous weblog layout! How long have
you been running a blog for? you make running a blog look
easy. The whole glance of your website is magnificent, as smartly
as the content material! You can see similar here e-commerce
buy ventolin online europe: Buy Ventolin inhaler online – ventolin order
buy ventolin online uk