ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’

Share the Article

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಅವರ 71 ನೇ ಜನುಮದಿನದ ಅಂಗವಾಗಿ ಸೆ. 17 ರಿಂದ 20 ದಿನಗಳ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

20 ದಿನಗಳ ಕಾಲ ರಕ್ತದಾನ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಚಿಂತನೆ ನಡೆಸಿದೆ.

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಈಗಾಗಲೇ ಎಲ್ಲಾ ರಾಜ್ಯ ಘಟಕಗಳಿಗೆ ಸೂಚನೆಯನ್ನು ಸಹ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಸಾರ್ವಜನಿಕ ಸೇವೆಯಲ್ಲಿ ತಮ್ಮ‌ನ್ನು ತಾವು ಮತ್ತಷ್ಟು ತೊಡಗಿಸಿಕೊಳ್ಳಲಿದ್ದಾರೆ. ಅವರ ಪ್ರಯತ್ನ‌ಗಳನ್ನು ಅಭಿನಂದಿಸಲು ಭಾರತದಾದ್ಯಂತ ಇರುವ ಬಿಜೆಪಿ ಬೂತ್‌ಗಳಿಂದ ಸುಮಾರು 5 ಕೋಟಿ ಪೋಸ್ಟ್‌ಕಾರ್ಡ್‌ಗಳನ್ನು ಪ್ರಧಾನಿ‌ಗಳಿಗೆ ಕಳುಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

ವರ್ಚುವಲ್ ಕಾರ್ಯಕ್ರಮ‌ಗಳು, ನಮೋ ಅಪ್ಲಿಕೇಶನ್ ಮೂಲಕವೂ ಈ ಕಾರ್ಯಕ್ರಮ‌ಗಳು ನಡೆಯಲಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಸಾಧನೆಯನ್ನು ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಉತ್ತರ ಪ್ರದೇಶದ‌ಲ್ಲಿ 71 ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ‌ವನ್ನು ಸಹ ಬಿಜೆಪಿ ಹಮ್ಮಿಕೊಂಡಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

Leave A Reply