ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹೊಸ ನೇಮಕಾತಿ | ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು, ವೇತನ ಶ್ರೇಣಿ ಇತರೆ ಮಾಹಿತಿಗಳು ಇಲ್ಲಿವೆ.
ಹುದ್ದೆಯ ವಿವರ
ಹುದ್ದೆಯ ಹೆಸರು : ಶೀಘ್ರಲಿಪಿಗಾರ
ಹುದ್ದೆಗಳ ಸಂಖ್ಯೆ: 8
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-09-2021
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 04-10-2021
ವೇತನ ಶ್ರೇಣಿ: 27,650-52,650 ರೂ.
ಗರಿಷ್ಠ ವಯೋಮಿತಿ ಅರ್ಹತೆಗಳು
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 38 ವರ್ಷ.
ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ.200.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ರೂ.100.
ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ – ರೂ.100.
ಶೈಕ್ಷಣಿಕ ವಿದ್ಯಾರ್ಹತೆ
*ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು
*ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು
ಅಥವಾ
*ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೇಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮೊ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯಗಳನ್ನಾಗಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಮೇಲಿನ ಅರ್ಹತೆಗಳ ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ
https://districts.ecourts.gov.in/sites/default/files/Rec%202021-stenographer.pdf
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://recruitmenthck.kar.nic.in/district/udu/stg/home.php