Home News ರಸ್ತೆ ಅಪಘಾತ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

ರಸ್ತೆ ಅಪಘಾತ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

Hindu neighbor gifts plot of land

Hindu neighbour gifts land to Muslim journalist

ಹೈದರಾಬಾದ್: ನಟ ಚಿರಂಜೀವಿ ಕುಟುಂಬದ ಕುಡಿ, ತೆಲುಗು ನಟ ಸಾಯಿಧರ್ಮ ತೇಜ್ ಅವರ ಬೈಕ್ ಅಪಘಾತ ನಡೆದಿದ್ದು,ಧರ್ಮ ತೇಜ್ ಸ್ಥಿತಿ ಗಂಭೀರವಾಗಿದೆ.

ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಸಾಯಿಧರ್ಮ ತೇಜ್ ಹೈದ್ರಾಬಾದ್‍ನ ಮಾದಾಪುರ್ ಕೇಬಲ್ ಬ್ರಿಡ್ಜ್ ಬಳಿ ಸ್ಪೋಟ್ಸ್ ಬೈಕ್‍ನಲ್ಲಿ ಬರುವಾಗ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಪಿಡ್ಸ್ ಬಂದು ಕೋಮಾ ಸ್ಥಿತಿಗೆ ತಲುಪಿದ್ದಾರೆ.

ಸಾಯಿಧರ್ಮ ತೇಜ್ ಬಲಗಣ್ಣು ಹಾಗೂ ಎದೆ ಭಾಗ, ಭುಜ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಹೈದ್ರಾಬಾದ್‍ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ವೈದ್ಯರು ಔಟ್ ಆಫ್ ಡೇಂಜರ್ ಎಂದು ತಿಳಿಸಿದ್ದಾರೆ. ಚಿರಂಜೀವಿ, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ಅಲ್ಲು ಅರವಿಂದ್ ಸೇರಿದಂತೆ ಇಡೀ ಕುಟುಂಬವೇ ಆಸ್ಪತ್ರೆಯಲ್ಲಿದ್ದಾರೆ. ಇತ್ತ ಅಭಿಮಾನಿಗಳು ಕಂಗಾಲಾಗಿದ್ದು ಕುಟುಂಬಸ್ಥರು ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಇನ್ನು ಬೈಕ್ ಸ್ಕಿಡ್ ಆಗಿ ಅಪಘಾತವಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಲಗಣ್ಣು, ಬಲಭಾಗದ ಎದೆಗೆ ಗಾಯಗಳಾಗಿದ್ದು, ಭುಜದ ಮೂಳೆ ಮುರಿದಿದೆ. ಮೆದುಳು ಹಾಗೂ ಇತರ ಸೂಕ್ತ ಭಾಗಕ್ಕೆ ಯಾವುದೇ ರೀತಿಯ ಪೆಟ್ಟು ಬಿದ್ದಿಲ್ಲ. ಸದ್ಯ ಕೋಮಾದಲ್ಲಿದ್ದಾರೆ, 24 ಗಂಟೆ ನಿಗಾವಹಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.