Home News ಶನಿವಾರ,ಭಾನುವಾರ ಕಟೀಲು, ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭಕ್ತರಿಗೆ ಪ್ರವೇಶ ನಿರ್ಬಂಧ

ಶನಿವಾರ,ಭಾನುವಾರ ಕಟೀಲು, ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭಕ್ತರಿಗೆ ಪ್ರವೇಶ ನಿರ್ಬಂಧ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ.

ಮುಂದಿನ ಆದೇಶದವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ.

ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತೀಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.

ಜಾತ್ರೆಗಳು, ದೇವಾಲಯದ ಉತ್ಸವಗಳು ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.