ಧರ್ಮಸ್ಥಳ | ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಳಿನ್ ಕುಮಾರ್ ಕಟೀಲ್ ರಿಂದ ಬಿಜೆಪಿ ನಾಮಫಲಕ ಅಳವಡಿಕೆ

Share the Article

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು ಬಿಜೆಪಿ ನಾಮಫಲಕ ಅಳವಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಜೊತೆಗಿದ್ದರು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಿಜೆಪಿ ಪ್ರಮುಖರಾದ ಉದಯ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply