Home latest ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ ಮೃತ್ಯು...

ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ ಮೃತ್ಯು !!

Hindu neighbor gifts plot of land

Hindu neighbour gifts land to Muslim journalist

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ.ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ ಆಗಿರಲಿಲ್ಲ. ಇದೀಗ ಆಕೆ ಮೃತಪಟ್ಟಿದ್ದಾಗಿ ವರದಿಯಾಗಿದೆ.

ಸಕಿನಾಕಾ ಏರಿಯಾದಲ್ಲಿ ನಿಂತಿದ್ದ ಟೆಂಪೋದ ಮೇಲೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಲಾಗಿತ್ತು. ರಕ್ತದ ಮಡುವಿನಲ್ಲಿ ನರಳುತ್ತ ಬಿದ್ದಿದ್ದ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಗೇ, ಕೆಲವೇ ಹೊತ್ತಲ್ಲಿ ಆರೋಪಿಯನ್ನೂ ಬಂಧಿಸಿದ್ದರು.ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ ರಾಡ್​ ಹಾಕಿ ಚಿತ್ರಹಿಂಸೆ ನೀಡಿದ್ದ.

ಈತನ ಈ ಕೃತ್ಯಕ್ಕೆ ಆಕೆಯ ಪ್ರಾಣವೇ ಹೋಗಿದೆ.ಪ್ರಸ್ತುತ ಪ್ರಕರಣದ ಸಂಬಂಧ ತನಿಖೆಯೂ ನಡೆಯುತ್ತಿದ್ದು,ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿಯಲ್ಲಿ ಈ ದುರ್ಘಟನೆ ನಡೆದಿತ್ತು.ಶುಕ್ರವಾರ ಮುಂಜಾನೆ ಹೊತ್ತಿಗೆ ಪೊಲೀಸರಿಗೆ ಯಾರೋ ಕರೆ ಮಾಡಿ, ಇಲ್ಲೊಬ್ಬ ವ್ಯಕ್ತಿ ಮಹಿಳೆಯೊಬ್ಬರನ್ನು ಥಳಿಸುತ್ತಿದ್ದಾನೆ ಎಂದು ಹೇಳಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಮಹಿಳೆಗೆ ತೀವ್ರ ರಕ್ತಸ್ರಾವ ಆಗಿತ್ತು ಎಂದು ವೈದ್ಯರು ಹೇಳಿದ್ದಾರೆ.

ಘಟನೆ ವಿರುದ್ಧ ರಾಷ್ಟ್ರಾದ್ಯಂತ ವಿರೋಧ ವ್ಯಕ್ತವಾಗಿದ್ದು,ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಮಾಡಲಾಗುತ್ತಿದೆ. ಶಿವಸೇನೆ ಎಂಎಲ್​ಸಿ ಮನಿಶಾ ಕಾಯಂದೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಹಾಗೇ, ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್​, ಈ ಘಟನೆ ಬಗ್ಗೆ ತುಂಬ ಶಾಕ್​ ವ್ಯಕ್ತಪಡಿಸಿದ್ದಾರೆ.