ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್

Share the Article

ಕಾಂಗ್ರೆಸ್‌ನವರು ಇನ್ನು ಎರಡಯ ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್‌ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯ ಸರಕಾರ ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂತಹ ಕಾರ್ಯಗಳು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ನಡೆಸಿಕೊಂಡು ಬಂದಿದ್ದ ಕೀಳುಮಟ್ಟದ ರಾಜಕೀಯದಿಂದ ಎಲ್ಲಿಯೂ ಅಭಿವೃದ್ಧಿಯೇ ಸಾಧ್ಯವಾಗಿರಲಿಲ್ಲ. ಹರೀಶ್‌ ಪೂಂಜ ಅವರು ಇದೀಗ ತಾಲೂಕಿನಲ್ಲಿ ಅಭಿವೃದ್ಧಿಯ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದೆ. ಹೀಗಾಗಿ ಕಾಂಗ್ರೆಸಿಗರು ಅಧಿಕಾರಕ್ಕೆ ಬರುವ ಕನಸು ಕಾಣಬೇಡಿ ಎಂದರು.
ಶಾಸಕ ಹರೀಶ್ ಪೂಂಜ,ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್,ಬೂತ್ ಅಧ್ಯಕ್ಷ ಸುಂದರ ಮೊದಲಾದವರಿದ್ದರು.

Leave A Reply