Home News ಕೊನೆಗೂ ತನ್ನ ಹಿಂದಿನ ಹೆಸರು ಉಳಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣ |”ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ”...

ಕೊನೆಗೂ ತನ್ನ ಹಿಂದಿನ ಹೆಸರು ಉಳಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣ |”ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಮರುನಾಮಕರಣ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು ವಿಮಾನ ನಿಲ್ದಾಣ ಕೊನೆಗೂ ತನ್ನ ಹಿಂದಿನ ಹೆಸರನ್ನು ಉಳಿಸಿಕೊಂಡಿದೆ. ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂಬ ಹೆಸರಿನಿಂದ ”ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ” ಎಂಬ ಹೆಸರಿಗೆ ಮರುನಾಮಕರಣವಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನುಎಂದು ಬದಲಿಸಿದ್ದ ಏರ್ ಪೋರ್ಟ್ ನಿರ್ವಹಣೆ ಗುತ್ತಿಗೆ ಸಂಸ್ಥೆ ಅದಾನಿಯೂ ಮತ್ತೆ ಏರ್ ಪೋರ್ಟ್ ನ ಹಿಂದಿನ ಹೆಸರಿನಂತೆಯೇ ಬದಲಿಸಿದೆ ಎಂದು ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.

ಕಳೆದ ವರ್ಷ ಮಂಗಳೂರು ಸಹಿತ ದೇಶದ ಹಲವು ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ಅದಾನಿ ಸಂಸ್ಥೆಗೆ ವಹಿಸಿದ ಬಳಿಕ ಸಂಸ್ಥೆಯು “ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ನಾಮಕರಣಗೊಳಿಸಿದ್ದು,ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ” ಸ್ಥಳೀಯರ ಹೋರಾಟಕ್ಕೆ ಯಶಸ್ಸು ದೊರೆದಿತ್ತು, ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಮತ್ತೆ ಮೊದಲಿನಂತೆಯೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ”ಎಂದು ಬದಲಿಸಿದೆ ಎಂದು ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ ಬಳಿಕ ಅಲ್ಲಿನ ನಾಮಫಲಕವನ್ನು ಕಂಪೆನಿಯು ಬದಲಾಯಿಸಿತ್ತು. ಆದರೆ ಮಂಗಳೂರು ವಿಮಾನ ನಿಲ್ದಾಣ ಮತ್ತು ಅದಾನಿ ಕಂಪೆನಿ ನಡುವೆ ನಡೆದ ಒಡಂಬಡಿಕೆಯಲ್ಲಿ ಹೆಸರು ಬದಲಾವಣೆಗೆ ಅವಕಾಶ ಇರಲಿಲ್ಲ ಎನ್ನುವುದು ಮಾಹಿತಿ ಹಕ್ಕಿನಿಂದ ತಿಳಿದುಬಂದಿತ್ತು.

ಆಳ್ವ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಪಡೆದು ಕಾನೂನು ಹೋರಾಟ ರೂಪಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಪ್ರಶ್ನಿಸಿದಾಗ ಪ್ರಾಧಿಕಾರವು “ಒಪ್ಪಂದದ ಪ್ರಕಾರ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸುವಂತಿಲ್ಲ’ ಎಂದು ತಿಳಿಸಿತ್ತು.

ಆ ಬಳಿಕ ಪ್ರಾಧಿಕಾರವು ಅದಾನಿ ಸಂಸ್ಥೆಗೆ ನೋಟಿಸ್‌ ನೀಡಿತ್ತು. ಇದರ ಆಧಾರದಲ್ಲಿ ನಡೆಸಿದ ಕಾನೂನು ಹೋರಾಟದ ಫಲವಾಗಿ ಶುಕ್ರವಾರ ಕಂಪೆನಿಯು ವಿಮಾಣ ನಿಲ್ದಾಣದ ನಾಮಫಲಕದಿಂದ ಅದಾನಿ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ. ಇದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಿತೇಶ್‌ ಡಿ’ಸೋಜಾ, ರಕ್ಷಣ್‌ ಉಪಸ್ಥಿತರಿದ್ದರು.