ನಟ ದರ್ಶನ್ ಫಾರ್ಮ್‌ಹೌಸ್‌ನಲ್ಲಿ ಅಪ್ರಾಪ್ತೆಯ ಅತ್ಯಾಚಾರ

Share the Article

ಕನ್ನಡ ಚಲನಚಿತ್ರ ನಟ ದರ್ಶನ್ ಮಾಲೀಕತ್ವದ ಮೈಸೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಸದಸ್ಯೆ ಅಪ್ರಾಪ್ತ ಬಾಲಕಿಯ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ.

ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಪೊಲೀಸರು ತಕ್ಷಣವೇ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave A Reply