Home Karnataka State Politics Updates ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಸಿಹಿ ಸುದ್ದಿ ನೀಡಿದ ಬಿಜೆಪಿ ಸರಕಾರ

ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಸಿಹಿ ಸುದ್ದಿ ನೀಡಿದ ಬಿಜೆಪಿ ಸರಕಾರ

Hindu neighbor gifts plot of land

Hindu neighbour gifts land to Muslim journalist

ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಬಿಜೆಪಿ ಸರಕಾರ ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿನ ಡೀಮ್ಸ್ ಫಾರೆಸ್ಟ್ ಎಂದು ಗುರುತಿಸಲಾಗಿರುವ 9 ಲಕ್ಷ ಹೆಕ್ಟೇರ್ ಭೂಮಿಯ ಪೈಕಿ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಕೊಡಲು ಅರಣ್ಯ ಇಲಾಖೆ ಸಮ್ಮತಿಸಿದ್ದು, ಈ ಭೂಮಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು, ಸಾಗುವಳಿ ಮಾಡುವವರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆ ಪ್ರಶೋತ್ತರ ಅವಧಿಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಈ ಹಿಂದೆ ಕೆಲ ಜಿಲ್ಲಾಧಿಕಾರಿಗಳು ಜನರ ಬೇಡಿಕೆ ಹಿನ್ನೆಲೆಯಲ್ಲಿ ತಮಗೆ ಇದರ ಹೊಣೆ ಬೇಡ ಎಂದು 9 ಲಕ್ಷ ಹೆಕ್ಟೇರ್ ಕಂದಾಯ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಎಂದು ಘೋಷಿಸಿ ಈ ಬಗ್ಗೆ ಸುಪ್ರೀಂಕೋಟ್‌ರ್ಗೆ ಪ್ರಮಾಣಪತ್ರ ಸಲ್ಲಿಸಿದ್ದರು.

ಇವುಗಳ ಪೈಕಿ 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಪಡೆಯಲು ಅರಣ್ಯ ಸಚಿವರ ಜತೆ ಚರ್ಚೆ ನಡೆಸಿದ್ದು, ಅವರು ಇದಕ್ಕೆ ಸ್ಪಂದಿಸಿದ್ದಾರೆ. ಹೀಗಾಗಿ ಸದ್ಯದಲ್ಲೇ ಈ ಭೂಮಿಯನ್ನು ಹಿಂಪಡೆದು ಸುಪ್ರೀಂಕೋಟ್‌ರ್ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು. ಅಲ್ಲದೆ, ಈ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ಮತ್ತು ಸಾಗುವಳಿ ಮಾಡುವವರಿಗೆ ಜಾಗ ನೀಡಲಾಗುವುದು ಎಂದರು.