Home News ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ ?? | ಸಿಕ್ಕಿದೆ ವ್ಯಕ್ತಿಯ ಮೊಬೈಲ್ ಸಂಖ್ಯೆ ಕಾರ್ಯಾಚರಿಸುತ್ತಿರುವ...

ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ ?? | ಸಿಕ್ಕಿದೆ ವ್ಯಕ್ತಿಯ ಮೊಬೈಲ್ ಸಂಖ್ಯೆ ಕಾರ್ಯಾಚರಿಸುತ್ತಿರುವ ಸುಳಿವು !!

Hindu neighbor gifts plot of land

Hindu neighbour gifts land to Muslim journalist

ನಾಪತ್ತೆಯಾದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮೊಬೈಲ್ ಸಂಖ್ಯೆಯು ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ.

ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಭೇಟಿ ನೀಡುವುದಾಗಿ ಹೇಳಿ ತನ್ನ ಮನೆಯನ್ನು ತೊರೆದಿದ್ದ ಆ ವ್ಯಕ್ತಿ ಹಿಮಾಚಲ ಪ್ರದೇಶಕ್ಕೆ ಏಕೆ ಹೋಗಿರುವುದು ಅಥವಾ ಅವರ ಮೊಬೈಲ್ ಫೋನ್ ಬೇರೆಯವರು ಹೊತ್ತೊಯ್ದಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

ಅವರ ಪತ್ನಿಯ ಹೇಳಿಕೆಯ ಪ್ರಕಾರ, ಅವರು ಜುಲೈ 18 ರಿಂದ ಬೆಂಗಳೂರಿಗೆ ತೆರಳಿದ ನಂತರ ನಾಪತ್ತೆಯಾಗಿದ್ದರು. ಆ ಬಳಿಕ ಯಾವುದೇ ಮಾಹಿತಿ ಬಂದಿರಲಿಲ್ಲ. ಆತ ಅಲ್ಲಿಂದ ತಪ್ಪಿಸಿಕೊಳ್ಳಲೆಂದೇ ಹೋಗಿದ್ದಾನೋ ಅಥವಾ ಆತ ತಪ್ಪಿಸಿಕೊಳ್ಳುವುದರ ಹಿಂದೆ ಬೇರೆ ಕಾರಣಗಳಿವೆಯೋ ಗೊತ್ತಿಲ್ಲ. ಈ ಬಗ್ಗೆ ತನಿಖೆಯಿಂದ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಈ ದೂರಿಗೆ ಸಂಬಂಧಿಸಿ ಪೊಲೀಸ್ ತನಿಖೆ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ನಾಪತ್ತೆಯಾದ ವ್ಯಕ್ತಿಯ ಚಹರೆ ದಿಲ್ಲಿಯಲ್ಲಿ ಬಂಧಿತನಾದ ಭಯೋತ್ಪಾದಕನ ಚಹರೆಯನ್ನೇ ಹೊಂದಿದೆ ಎಂಬ ಸುದ್ದಿ ಹರಡಿ ಉಪ್ಪಿನಂಗಡಿ, ನೆಕ್ಕಿಲಾಡಿ ಪರಿಸರದ ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.