ದತ್ತಪೀಠದ ಪೂಜಾ ಕೈಂಕರ್ಯ | ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ ಕೋರ್ಟ್

Share the Article

ಬೆಂಗಳೂರು, ಸೆ. 27: ದತ್ತಪೀಠದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ 2018ರ ಮಾ.19ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನ ಸಮಿತಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಲಿದೆ.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಾದ-ಪ್ರತಿವಾದ ಆಲಿಕೆ ಪೂರ್ಣಗೊಳಿಸಿ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ ಅಪರಾಹ್ನ 1.25ಕ್ಕೆ ತೀರ್ಪು ಪ್ರಕಟಿಸಲಿದೆ.

Leave A Reply