ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

Share the Article

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.

ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರವರಿಗೆ ಆಹ್ವಾನ ನೀಡಲಾಗುವುದು ಎಂದಿದ್ದಾರೆ. ಅಕ್ಟೋಬರ್​​ 7ರಿಂದ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ.

Leave A Reply