ಪಾರ್ಕಿನಲ್ಲಿ ಸಾವು ಮಗುವಿಗಾಗಿ ಹೊಂಚು ಹಾಕಿ ಕೂತಿತ್ತು | ಆಟ ಆಡುವಾಗ ವಿದ್ಯುತ್ ತಗುಲಿ ಬಾಲಕ ಬಲಿ !!

Share the Article

ಪಾರ್ಕಿನಲ್ಲಿ ಆಟವಾಡುತ್ತಿರುವಾಗ ಬಾಲಕನಿಗೆ ಸಾವು ಕಾದು ಕುಳಿತಿತ್ತು. ಆಟ ಆಡುತ್ತಿರುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ನಗರದ ಕಲ್ಬುರ್ಗಿಯ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ.

ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ಆತ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಿಕೆಯಡಿಯಲ್ಲಿ ಬರುವ ಈ ಹೈ ಮಾಸ್ಕ್ ದೀಪದಿಂದಾಗಿ ಸಾವನ್ನಪ್ಪಿದ್ದ ಘಟನೆ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಾಲ್ ಲೋಖಂಡೆ ಖೇದ ವ್ಯಕ್ತ ಪಡಿಸಿದ್ದಾರೆ.

ಈ ಘಟನೆ ಬಗ್ಗೆ ಮಾತನಾಡಿದ ಅವರು, ಆಟ ಆಡುವಾಗ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ನಲ್ಲಿ ಕೈ ಇಟ್ಟಿದ್ದರಿಂದ ಆಕಸ್ಮಿಕವಾಗಿ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಪಾಲಕರೊಂದಿಗೆ ಮಾತನಾಡಿದ್ದು, ಅವರಿಗೆ ಸಾಂತ್ವನ ಹೇಳಿದ್ದಲ್ಲದೇ, ಪರಿಹಾರ ಕೊಡುವ ಬಗ್ಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

Leave A Reply