Home latest ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

Hindu neighbor gifts plot of land

Hindu neighbour gifts land to Muslim journalist

ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ
ವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ.

ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌ ಅವರಿಗೆ ಪೂರ್ವಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾಹಿತಿ ನೀಡಿದರು.

ರಾಷ್ಟ್ರಪತಿ ಭವನದ ನಿರ್ದೇಶನ ಹಾಗೂ ಶಿಷ್ಟಾಚಾರದಂತೆ ವಾಸ್ತವ್ಯ, ಊಟೋಪಚಾರ ಹಾಗೂ ಜತೆಗೆ ಆಗಮಿಸುವ ಅಧಿಕಾರಿಗಳು, ಸಿಬಂದಿಗೆ ವಸತಿ, ಊಟೋಪಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು. ಆ್ಯಂಬುಲೆನ್ಸ್‌, ವೈದ್ಯರ ತಂಡ ಸಿದ್ಧವಿದೆ ಹಾಗೂ ಸಂಪರ್ಕ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.

ಮುಖ್ಯವಾಗಿ ಕೋವಿಡ್‌ ನಿಯಮಾವಳಿ ಅನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗು ವುದು. ಮೆಸ್ಕಾಂನಿಂದ ವಿದ್ಯುತ್‌ ಕಡಿತ ವಾಗದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಡಿಸಿಪಿ ಹರಿರಾಮ್‌ ಶಂಕರ್‌,ಮೆಸ್ಕಾಂ ಎಂಡಿ ಪ್ರಶಾಂತ್‌ ಮಿಶ್ರ, ಎಸಿ ಮದನಮೋಹನ್‌, ಲೋಕೋಪ ಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಯಶವಂತ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.