ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಕ್ಕೆ ಕಡಿವಾಣ ಬೀಳಲಿ!!ಜಿಲ್ಲಾಧಿಕಾರಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ
![](https://hosakannada.com/wp-content/uploads/2021/10/IMG-20211001-WA0022.jpg)
ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿರುವ ಮಹಿಳಾ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಆ ಮೂಲಕ ಗ್ರಾಮ ಮಟ್ಟದಿಂದಲೇ ಇಂತಹ ಪ್ರಕರಣಗಳ ಮಟ್ಟಹಾಕಬೇಕು, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸಬೇಕು, ಮುಂದೆ ಇಂತಹ ಪ್ರಕರಣಗಳು ಹೆಚ್ಚಾಗದಂತೆ ನಿಗಾ ವಹಿಸಬೇಕೆಂದು ಜಯಕರ್ನಾಟಕ ಜನಪರ ವೇದಿಕೆ ಒತ್ತಾಯಿಸಿದೆ.
![](https://hosakannada.com/wp-content/uploads/2021/10/IMG-20211001-WA0023.jpg)
ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ, ರಾಜ್ಯಾಧ್ಯಕ್ಷರಾದ ಶ್ರೀ ಆರ್. ಚಂದ್ರಪ್ಪ, ರಾಜ್ಯ ಕಾರ್ಯಧ್ಯಕ್ಷ ಅಣ್ಣಪ್ಪ ಓಲೇಕಾರ್ ಮಾರ್ಗದರ್ಶನದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ, ನಗರ ಪೊಲೀಸ್ ಆಯುಕ್ತರ ಸಹಿತ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
![](https://hosakannada.com/wp-content/uploads/2021/10/IMG-20211001-WA0021.jpg)
ಈ ಸಂದರ್ಭದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾದ ರಾಮದಾಸ್ ಶೆಟ್ಟಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬ್ರಿಜೇಶ್ ನಾಯರ್, ಪ್ರವೀಣ್ ಶೆಟ್ಟಿ ತಿಂಗಳಾಡಿ, ರಘುನಾಥ್ ವಿಟ್ಲ, ಗುಣಪಾಲ ದಾಸ್, ತೌಫಿಕ್ ಮತ್ತಿತರರು ಉಪಸ್ಥಿತರಿದ್ದರು.