Home News ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿ ಕೊಳ್ಳಲು ಸಹಾಯಧನಕ್ಕೆ...

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿ ಕೊಳ್ಳಲು ಸಹಾಯಧನಕ್ಕೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಪ್ರಸ್ತುತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರು ಕೃಷಿಯಲ್ಲಿ ಸೂಕ್ಷ್ಮ ನೀರಾವರಿಯನ್ನು ಅಳವಡಿಸಿ ಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದ ರೈತರು ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗ ಹನಿ/ತುಂತುರು ನೀರಾವರಿ ಸೌಲಭ್ಯವನ್ನು ಅಳವಡಿಸಿಕೊಳ್ಳಲು ಶೇ.45 ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರು/ಪ.ಜಾತಿ ಮತ್ತು ಪ.ಪಂಗಡದ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದ್ದು, ವಿಕಲಚೇತನರಿಗೆ ಆದ್ಯತೆ ಮೇರೆಗೆ ವಿತರಿಸಲಾಗುವುದು.

ಆಸಕ್ತರು ರೈತರು ಅರ್ಜಿ, ಪಹಣಿ, ಆಧಾರ ಪ್ರತಿ ಬ್ಯಾಂಕ್ ಖಾತೆಯ ವಿವರ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಜಮೀನಿನ ನಕ್ಷೆ, ಚೆಕ್‌ಬಂಧಿ, ಬೆಳೆ ದೃಢೀಕರಣ ಪತ್ರ ಹಾಗೂ ಹನಿ/ತುಂತುರು ನೀರಾವರಿ ಅಳವಡಿಸುವ ಕಂಪೆನಿಯ ವಿವರದೊಂದಿಗೆ ಇಲಾಖೆಯ ತಾಲೂಕು ಕಛೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕರ ಕಚೇರಿ ದೂ.ಸಂ: 0820-2531950, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಉಡುಪಿ ತಾಲೂಕು ದೂ.ಸಂ: 0820-2522837, ಕುಂದಾಪುರ ತಾಲೂಕು: 08254-230813 ಹಾಗೂ ಕಾರ್ಕಳ ತಾಲೂಕು: 08258- 230288 ನ್ನು ಸಂಪರ್ಕಿಸುವಂತೆ ತೋಟಗಾರಿಕಾ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.