ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ | ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಕೊರೊನಾದಿಂದ ಕಂಗೆಟ್ಟಿದ್ದ ಅತಿಥಿ ಶಿಕ್ಷಕರಿಗೆ ಇದೀಗ ಸಿಹಿ ಸುದ್ದಿ ದೊರೆತಿದ್ದು, ಇಷ್ಟು ಕಾಲ ಕೆಲಸವಿಲ್ಲದೆ ಹಲವು ರೀತಿಯಲ್ಲಿ ಕಷ್ಟಪಟ್ಟ ಅತಿಥಿ ಶಿಕ್ಷಕರ ಕಷ್ಟದ ಕಾಲ ಕಳೆದುಹೋಗುವ ಸಮಯ ಸನ್ನಿಹಿತವಾಗಿದೆ. ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಪ್ರೌಢಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢ ಶಾಲೆಗಳಿಗೆ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಪ್ರತಿವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯಲ್ಲಿ ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಜಿಲ್ಲಾವಾರು ಮತ್ತು ತಾಲೂಕುವಾರು ಶಿಕ್ಷಕರ ಹಾಗೂ ಅನುದಾನದ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ.
ಆದಷ್ಟು ಬೇಗ ಈ ನೇಮಕಾತಿ ಆರಂಭಗೊಳ್ಳಲಿದೆ. ಇಷ್ಟು ದಿನ ನೇಮಕಾತಿಗೆ ಕಾದುಕುಳಿತಿದ್ದ ಅತಿಥಿ ಶಿಕ್ಷಕರು ಇದೀಗ ನಿಟ್ಟುಸಿರುಬಿಡುವಂತಾಗಿದೆ.