Home News ಮಂಗಳೂರು | ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನ ಬಂಧನ

ಮಂಗಳೂರು | ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನ ಬಂಧನ

Hindu neighbor gifts plot of land

Hindu neighbour gifts land to Muslim journalist

ಮಹಿಳಾ ಸಿಬ್ಬಂದಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ (47) ಬಂಧಿತ ಆರೋಪಿ.

ಘಟನೆಯ ವಿವರ: ತನ್ನ ಕಚೇರಿಯಲ್ಲಿ ಕೆಲಸಕ್ಕಿದ್ದ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದಲ್ಲದೆ, ವಾಟ್ಸಪ್ ಮೂಲಕ ತನ್ನ ನಗ್ನ ಚಿತ್ರಗಳನ್ನು ಕಳುಹಿಸಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಯುವತಿಯ ನಗ್ನ ಚಿತ್ರಗಳನ್ನೂ ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.

ಇದಕ್ಕೆ ಸಹಕರಿಸದ ಆಕೆ ಆತನಿಂದ ದೂರವಿದ್ದು, ಇದರ
ನಡುವೆ ಆತ ಕಛೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.